Kishore Kumar Hits

Venkatesh Kumar - Thoredu Jeevisabahude şarkı sözleri

Sanatçı: Venkatesh Kumar

albüm: Smarane Saalade


ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ತಾಯಿ-ತಂದೆಯ ಬಿಟ್ಟು ತಪವ ಮಾಡಲುಬಹುದು
ತಾಯಿ-ತಂದೆಯ ಬಿಟ್ಟು ತಪವ ಮಾಡಲುಬಹುದು
ದಾಯಾದಿ ಬಂಧುಗಳ ಬಿಡಲು ಬಹುದು
ದಾಯಾದಿ ಬಂಧುಗಳ ಬಿಡಲು ಬಹುದು
ರಾಯತಾ ಮುನಿದರೆ ರಾಜ್ಯವನೆ ಬಿಡಬಹುದು
ರಾಯತಾ ಮುನಿದರೆ ರಾಜ್ಯವನೆ ಬಿಡಬಹುದು
ಕಾಯಜಾಪಿತ ನಿನ್ನ ಅಡಿಯ ಬಿಡಲಾಗದು
ಬಿಡಲಾಗದು, ಬಿಡಲಾಗದು
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು
ಒಡಲು ಹಸಿಯಲು ಅನ್ನವಿಲ್ಲದಲೆ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೇ ಬಿಡಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಯೇ ಬಿಡಬಹುದು
ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು
ಬಿಡಲಾಗದು, ಬಿಡಲಾಗದು
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು
ಪ್ರಾಣವನು ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಲುಬಹುದು
ಮಾನದಲಿ ಮನವ ತಗ್ಗಿಸಲುಬಹುದು
ಪ್ರಾಣನಾಯಕನಾದ ಆದಿಕೇಶವರಾಯ
ಪ್ರಾಣನಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣಾ, ನಿನ್ನಡಿಯ ಬಿಡಲಾಗದು
ಬಿಡಲಾಗದು, ಬಿಡಲಾಗದು
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ
ಹರಿ ನಿನ್ನ ಚರಣಗಳ
ಹರಿ ನಿನ್ನ ಚರಣಗಳ

Поcмотреть все песни артиста

Sanatçının diğer albümleri

Benzer Sanatçılar