ತರವಲ್ಲ ತಗಿ ನಿನ್ನ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೇ ಬಾರಿಸದಿರು ತಂಬೂರಿ
ಸರಸ ಸಂಗೀತದ ಕುರುಹುಗಳರಿಯದೆ
ಸರಸ ಸಂಗೀತದ ಕುರುಹುಗಳರಿಯದೆ
ಬರದೆ ಬಾರಿಸದಿರೋ ತಂಬೂರಿ
(ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ)
♪
ಮದ್ದಾಲಿ ದನಿಯೊಳು ತಂಬೂರಿ
ಅದ ತಿದ್ದಿ ನುಡಿಸಬೇಕು ತಂಬೂರಿ
ಮದ್ದಾಲಿ ದನಿಯೊಳು ತಂಬೂರಿ
ಅದ ತಿದ್ದಿ ನುಡಿಸಬೇಕು ತಂಬೂರಿ
ಸಿದ್ದ ಸಾಧಕರ ವಿದ್ಯೆಗೆ ಒದಗುವ
ಸಿದ್ದ ಸಾಧಕರ ವಿದ್ಯೆಗೆ ಒದಗುವ
ಬುದ್ದಿವಂತಕೆ ತಕ್ಕ ತಂಬೂರಿ
(ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ)
♪
ಹಸನಾದ ಮೇಳಕ್ಕೆ ತಂಬೂರಿ ಇದು
ಕುಶಲರಿಗೊಪ್ಪುವ ತಂಬೂರಿ
ಹಸನಾದ ಮೇಳಕ್ಕೆ ತಂಬೂರಿ ಇದು
ಕುಶಲರಿಗೊಪ್ಪುವ ತಂಬೂರಿ
ಶಿಶುನಾಳಧೀಶನ ಓದು ಪುರಾಣದಿ
ಶಿಶುನಾಳಧೀಶನ ಓದು ಪುರಾಣದಿ
ಶಿಶುನಾಳಧೀಶನ ಓದು ಪುರಾಣದಿ
ಹಸನಾಗಿ ಬಾರಿಸೋ ತಂಬೂರಿ
(ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ
ತರವಲ್ಲ ತಗಿ ನಿನ್ನ ತಂಬೂರಿ ಸ್ವರ
ಬರದೆ ಬಾರಿಸದಿರು ತಂಬೂರಿ)
Поcмотреть все песни артиста
Sanatçının diğer albümleri